ವಿಷಯಕ್ಕೆ ಹೋಗು

ಗಿರಿಯೊಳು ಮನದೊಳು ಗಿಡಗಿಡದತ್ತ

ವಿಕಿಸೋರ್ಸ್ದಿಂದ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya

ಗಿರಿಯೊಳು ಮನದೊಳು ಗಿಡಗಿಡದತ್ತ ದೇವ
ಎನ್ನದೇವ
ಬಾರಯ್ಯಾ
ತೋರಯ್ಯಾ ನಿಮ್ಮ ಕರುಣವನೆಂದು
ನಾನು ಅರಸುತ್ತ ಅಳಲುತ್ತ ಕಾಣದೆ ಸುಯಿದು ಬಂದು ಕಂಡೆ. ಶರಣರ ಸಂಗದಿಂದ ಅರಸಿ ಹಿಡಿದಿಹೆನಿಂದು ನೀನಡಗುವ ಠಾವ ಹೇಳಾ ಚೆನ್ನಮಲ್ಲಿಕಾರ್ಜುನಾ.