ಗುಡಿಯೊಳಗಿರ್ದು ಗುಡಿಯ ನೇಣ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಗುಡಿಯೊಳಗಿರ್ದು ಗುಡಿಯ ನೇಣ ಕೊಯಿದಡೆ
ಗುಡಿಯ ದಡಿಗೆ ಬಿದ್ದು ಹಲ್ಲು ಹೋಹುದು
ನೋಡಾ
ಪೊಡವಿಗೀಶ್ವರನ ಗರ್ಭಾವಾಸದೊಳಗಿರ್ದು ನುಡಿವರು ಮತ್ತೊಂದು ದೈವವುಂಟೆಂದು. ತುಡುಗುಣಿನಾಯನು ಪಿಡಿತಂದು ಸಾಕಿದಡೆ ತನ್ನೊಡೆಯಂಗೆ ಬಗಳುವಂತೆ ಕಾಣಾ ಕೂಡಲಸಂಗಮದೇವಾ.