ಗುದ ಲಿಂಗ ನಾಭಿಕಮಲದಿಂದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುದ ಲಿಂಗ ನಾಭಿಕಮಲದಿಂದ ಮೇಲೆ ಷಡಂಗುಲವನೊತ್ತಿದಡೆ ಕಣ್ಣಿಲ್ಲದೆ ಕಾಣಬಹುದು ಲಿಂಗಪ್ರಕಾಶವ
ಕಿವಿಯಿಲ್ಲದೆ ಕೇಳಬಹುದು ಮಹಾನಾದ ಸುನಾದವ ಕಂಡು ಕೇಳಿದ ಬಳಿಕ ಮನ ನಂಬದಿದ್ದಡೆ ಮಕ್ಕಳಾಟಿಕೆ ತಪ್ಪದು ಗುಹೇಶ್ವರಾ.