ಗುರುಪ್ರಸಾದವ ಕೊಂಡು ಕೊಂಡು
ಗೋಚರ
ಲೇಖಕರು: ಷಣ್ಮುಖಸ್ವಾಮಿ
ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಗುರುಪ್ರಸಾದವ ಕೊಂಡು ಎನ್ನ ತನು ಶುದ್ಧಪ್ರಸಾದವಾಯಿತ್ತು. ಲಿಂಗಪ್ರಸಾದವ ಕೊಂಡು ಎನ್ನ ಮನ ಸಿದ್ಧಪ್ರಸಾದವಾಯಿತ್ತು. ಜಂಗಮಪ್ರಸಾದವ ಕೊಂಡು ಎನ್ನ ಪ್ರಾಣವು ಪ್ರಸಿದ್ಧಪ್ರಸಾದವಾಯಿತ್ತು. ಇಂತೀ ತ್ರಿವಿಧಪ್ರಸಾದವ ಕೊಂಡು ಎನ್ನ ಭವ ನಾಸ್ತಿಯಾಗಿತ್ತಾಗಿ
ಅಖಂಡೇಶ್ವರಾ
ಇನ್ನೆನಗೆ ಆವಾವ ಭಯವಿಲ್ಲವಯ್ಯ.