ಗುರುಭಕ್ತಿಯ ಮಾಡಬಹುದಲ್ಲದೆ, ಲಿಂಗಭಕ್ತಿಯ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಗುರುಭಕ್ತಿಯ ಮಾಡಬಹುದಲ್ಲದೆ
ಲಿಂಗಭಕ್ತಿಯ ಮಾಡಬಾರದು. ಲಿಂಗಭಕ್ತಿಯ ಮಾಡಬಹುದಲ್ಲದೆ
ಜಂಗಮಭಕ್ತಿಯ ಮಾಡಬಾರದು. ಜಂಗಮಭಕ್ತಿಯ ಮಾಡಬಹುದಲ್ಲದೆ
ಸಮಯಭಕ್ತಿಯ ಮಾಡಬಾರದು. ಸಮಯಭಕ್ತಿಯ ಮಾಡಬಹುದಲ್ಲದೆ
ಸಮಯ ಸಂತೋಷವ ಮಾಡಬಾರದು ಇವೆಲ್ಲವನು ಮಾಡಬಹುದಲ್ಲದೆ
ತನ್ನ ತಾನರಿಯಬಾರದು ! ತನ್ನ ತಾನರಿದೆಹೆನೆಂಬ ಅಹಂಕಾರವುಳ್ಳಡೆ ನಿಮ್ಮವರಿಗೆ ದೂರ. ಎಲೆ ದೇವಾ
ಅನ್ಯಕ್ಕೆ ಆಸೆ ಮಾಡಿದೆನಾದಡೆ ನಿಮ್ಮಾಣೆ
ನಿಮ್ಮ ಪ್ರಮಥರಾಣೆ ಕೂಡಲಸಂಗಮದೇವಾ.