ಗುರುಮುಖದಿಂದ ಪರಮಲಿಂಗವು ತನ್ನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರುಮುಖದಿಂದ ಪರಮಲಿಂಗವು ತನ್ನ ಕರವ ಸೇರಿದ ಬಳಿಕ ಆ ಲಿಂಗದಲ್ಲಿ ಸ್ನೇಹ ಮೋಹವ ಬಲಿದು
ಲಿಂಗಪ್ರೇಮಿಯಾಗಿ
ಲಿಂಗಭಾವದಲ್ಲಿ ತನ್ನ ಭಾವವ ಬಲಿದ ಬಳಿಕ ಅನ್ಯವಿಷಯವ್ಯಾಪ್ತಿಯ ವ್ಯವಹಾರದ ಭ್ರಾಂತಿಯಿಲ್ಲದಿರಬೇಕು ನೋಡಾ. ಇದೇ ಏಕಚತ್ತಮನೋಭಾವಿಯ ಗುಣ; ಇದೇ ಲಿಂಗಗ್ರಾಹಕನ ನಿರುತ. ಲಿಂಗವ ಮುಟ್ಟಿ ಮತ್ತೇನನೂ ಮುಟ್ಟದ ನಿಃಕಳಂಕನ ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.