ಗುರುವಿಂಗೆ ಗುರುವಾಗಿ ಗುರುಪ್ರಸಾದವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರುವಿಂಗೆ ಗುರುವಾಗಿ ಗುರುಪ್ರಸಾದವ ಕೊಂಬುದು
ಲಿಂಗಕ್ಕೆ ಲಿಂಗವಾಗಿ ಲಿಂಗಪ್ರಸಾದವ ಕೊಂಬುದು
ಜಂಗಮಕ್ಕೆ ಜಂಗಮವಾಗಿ ಜಂಗಮಪ್ರಸಾದವ ಕೊಂಬುದು
ಪ್ರಸಾದಕ್ಕೆ ಪ್ರಸಾದವಾಗಿ ಪ್ರಸಾದವನೆ ಕೊಂಬುದು. ಈ ಚತುರ್ವಿಧಸ್ಥಲಕ್ಕೆ ಚತುರ್ವಿಧವಾಗಬಲ್ಲಡೆ
ಕೂಡಲಚೆನ್ನಸಂಗನಲ್ಲಿ ಲಿಂಗೈಕ್ಯವು.