ಗುರುವಿಂಗೆ ತನುವನರ್ಪಿಸಿದಲ್ಲದೆ ತನುವಿನ ವಾಸನೆ ಹರಿಯದು. ಲಿಂಗಕ್ಕೆ ಮನವನರ್ಪಿಸಿದಲ್ಲದೆ ಮನದ ವಾಸನೆ ಹರಿಯದು. ಜಂಗಮಕ್ಕೆ ಧನವನರ್ಪಿಸಿದಲ್ಲದೆ ಧನದ ವಾಸನೆ ಹರಿಯದು. ಇದು ಕಾರಣ ತ್ರಿವಿಧಕ್ಕೆ ತ್ರಿವಿಧವನರ್ಪಿಸಿ ತ್ರಿವಿಧ ವಾಸನೆಯ ಹರಿದು
ತ್ರಿವಿಧವು ಒಂದಾದ ಘನವನೊಡಗೂಡಬಲ್ಲಡೆ ಸದ್ಭಕ್ತನೆಂಬೆನಯ್ಯ ಅಖಂಡೇಶ್ವರಾ.