ಗುರುವಿದು ಲಿಂಗವಿದು ಜಂಗಮವಿದು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಗುರುವಿದು ಲಿಂಗವಿದು ಜಂಗಮವಿದು ಎಂಬ ಭೇದವ ಏಕವ ಮಾಡಿ ನಿನಗೆ ತೋರಿದವರಾರು ಹೇಳಾ ? ಆದಿ ಅನಾದಿಯನು ಒಂದು ಮಾಡುವ
ಭಾವ ನಿರ್ಭಾವವನು ಅರುಹಿದವರಾರು ಹೇಳಾ ? ದೀಕ್ಷೆ ಶಿಕ್ಷೆ ಸ್ವಾನುಭಾವದ ಪರಿಯ ತೋರಿ ನಿಜಪದದಲ್ಲಿ ನಿಲಿಸಿದವರಾದು ಹೇಳಾ ? ಗುಹೇಶ್ವರಲಿಂಗದಲ್ಲಿ ನಿನ್ನ ಆಯತವ ಹೇಳಾ ಮಡಿವಾಳ ಮಾಚಯ್ಯಾ ?