ಗುರುವಿನಿಂದ ಉಪದೇಶವ ಪಡೆದು,
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಗುರುವಿನಿಂದ ಉಪದೇಶವ ಪಡೆದು
ಗುರುಪುತ್ರನೆನಿಸಿಕೊಂಡ ಬಳಿಕ ಪೂರ್ವದ ತಾಯಿತಂದೆಯೆಂದು
ಬಂಧುಗಳೆಂದು
ಮಲಸಂಬಂಧವ ನೆನೆಯಲಾಗದು ಕಾಣಿರೊ. ಇನ್ನಿವ ನೆನೆದಿರಾದರೆ ಶಿವದ್ರೋಹ ತಪ್ಪದಯ್ಯ. ಇನ್ನು ನಿಮಗೆ ತಾಯಿ ತಂದೆಗಳ ಹೇಳಿಹೆ ಕೇಳಿರೆ. ಗುರುವೇ ತಾಯಿ
ಗುರುವೇ ತಂದೆ
ಗುರುವೇ ಬಂಧುಗಳು. ಗುರುವಿನಿಂದ ಪರವಿನ್ನಾರೂ ಇಲ್ಲವೆಂದು ನಂಬಬಲ್ಲರೆ ಶಿಷ್ಯನೆಂಬೆನಯ್ಯಾ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.