ಗುರುವಿನ ಕರುಣದಿಂದ ಲಿಂಗವ ಕಂಡೆ ಜಂಗಮನ ಕಂಡೆ. ಗುರುವಿನ ಕರುಣದಿಂದ ಪಾದೋದಕವ ಕಂಡೆ ಪ್ರಸಾದವ ಕಂಡೆ. ಗುರುವಿನ ಕರುಣದಿಂದ ಸಜ್ಜನ ಸದ್ಭಕ್ತರ ಸದ್ಗೋಷ್ಠಿಯ ಕಂಡೆ. ಚೆನ್ನಮಲ್ಲಿಕಾರ್ಜುನಯ್ಯಾ ನಾ ಹುಟ್ಟಲೊಡನೆ ಶ್ರೀಗುರು ವಿಭೂತಿಯ ಪಟ್ಟವ ಕಟ್ಟಿ ಲಿಂಗಸ್ವಾಯತವ ಮಾಡಿದನಾಗಿ ಧನ್ಯಳಾದೆನು.