Library-logo-blue-outline.png
View-refresh.svg
Transclusion_Status_Detection_Tool

ಗುರುವಿನ ಪ್ರಾಣ ಲಿಂಗದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಗುರುವಿನ ಪ್ರಾಣ ಲಿಂಗದಲ್ಲಿ ಲೀಯವಾದ ಬಳಿಕ ಆ ಲಿಂಗವೆನ್ನ ಕರಸ್ಥಲಕ್ಕೆ ಬಂದಿತ್ತು ನೋಡಾ. ಇದ್ದಾನೆ ನೋಡಾ ಎನ್ನ ಗುರು ಅನಿಮಿಷನು ಎನ್ನ ಕರಸ್ಥಲದಲ್ಲಿ. ಇದ್ದಾನೆ ನೋಡಾ ಎನ್ನ ಗುರು ಅನಿಮಿಷನು ಎನ್ನ ಜ್ಞಾನದೊಳಗೆ. ಇದ್ದಾನೆ ನೋಡಾ ಎನ್ನ ಗುರುವಿನ ಗುರು ಪರಮಗುರು ಬಸವಣ್ಣ ಎನ್ನ ಕಂಗಳ ಮುಂದೆ ! ಗುಹೇಶ್ವರ ಸಾಕ್ಷಿಯಾಗಿ
ಎನ್ನ ಮೇಲೆ ದ್ರೋಹವಿಲ್ಲ ಕಾಣಾ ಚನ್ನಬಸವಣ್ಣಾ !