ವಿಷಯಕ್ಕೆ ಹೋಗು

ಗುರುವುಪದೇಶವುಳ್ಳವರ ಗುರುವೆಂದೆ ಕಾಬೆನು,

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಗುರುವುಪದೇಶವುಳ್ಳವರ ಗುರುವೆಂದೆ ಕಾಬೆನು
ಲಿಂಗಾಂಗಸಂಗಿಗಳ ನಿಜಲಿಂಗವೆಂದೆ ಕಾಬೆನು
ಜಂಗಮಾರ್ಚಕರ ಸರ್ವಾಂಗಲಿಂಗಿಗಳೆಂದೆ ಕಾಬೆನು. ಕೂಡಲಸಂಗಮದೇವರಲ್ಲಿ ಸಹಜಭಕ್ತರ ಕಂಡಡೆ
ಅವರ ನೀನೆಂದೇ ನಚ್ಚಿ ಮೆಚ್ಚಿ ಅಚ್ಚೊತಿದಂತಿಪ್ಪೆನಯ್ಯಾ ಚೆನ್ನಬಸವಣ್ಣಾ.