ಗುರುವೆ ತೆತ್ತಿಗನಾದ, ಲಿಂಗವೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಗುರುವೆ ತೆತ್ತಿಗನಾದ
ಲಿಂಗವೆ ಮದುವಣಿಗನಾದ
ನಾನೆ ಮದುವಳಿಗೆಯಾದೆನು. ಈ ಭುವನವೆಲ್ಲರಿಯಲು ಅಸಂಖ್ಯಾತರೆನಗೆ ತಾಯಿತಂದೆಗಳು. ಕೊಟ್ಟರು ಸಾದೃಶ್ಯವಪ್ಪ ವರನ ನೋಡಿ. ಇದು ಕಾರಣ ಚೆನ್ನಮಲ್ಲಿಕಾರ್ಜುನನೆ ಗಂಡನೆನಗೆ. ಮಿಕ್ಕಿನ ಲೋಕದವರೆನಗೆ ಸಂಬಂಧವಿಲ್ಲವಯ್ಯಾ ಪ್ರಭುವೆ.