ಗುರುಶಿಷ್ಯಸಂಬಂಧವನೇನೆಂದುಪಮಿಸುವೆ ? ಜ್ಯೋತಿಯಲೊದಗಿದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರುಶಿಷ್ಯಸಂಬಂಧವನೇನೆಂದುಪಮಿಸುವೆ ? ಜ್ಯೋತಿಯಲೊದಗಿದ ಜ್ಯೋತಿಯಂತಿರಬೇಕು
ದರ್ಪಣದೊಳಡಗಿದ ಪ್ರತಿಬಿಂಬದಂತಿರಬೇಕು
ಸ್ಫಟಿಕದೊಳಗಿರಿಸಿದ ರತ್ನದಂತಿರಬೇಕು
ರೂಪಿನ ನೆಳಲಿನ ಅಂತರಂಗದಂತಿರಬೇಕು. ಇದು ಕಾರಣ
ಕೂಡಲಚೆನ್ನಸಂಗಯ್ಯಾ ದರ್ಪಣವ ದರ್ಪಣಕ್ಕೆ ತೋರಿದಂತಿರಬೇಕು