ಗುರುಶಿಷ್ಯ ! ಸಂಬಂಧವೆಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರುಶಿಷ್ಯ ಸಂಬಂಧವೆಂದು ನುಡಿಯುತಿರ್ಪರೆಲ್ಲರು; ಗುರುಶಿಷ್ಯ ಸಂಬಂಧವನಾರೂ ಅರಿಯರಲ್ಲ ! ಗುರುಶಿಷ್ಯ ಸಂಬಂಧವೆಂತೆಂದೊಡೆ ಹೇಳಿಹೆವು ಕೇಳಿರೋ ಸದ್ಭಕ್ತ ಶರಣಜನಂಗಳೆಲ್ಲರು. ಶ್ರೀಗುರು ಶಿಷ್ಯಂಗೆ ಉಪದೇಶವ ಮಾಡುವ ಕಾಲದಲ್ಲಿ ಆ ಶಿಷ್ಯನ ಸ್ಥೂಲತನು ಸೂಕ್ಷ್ಮತನು ಕಾರಣತನುವೆಂಬ ತನುತ್ರಯಂಗಳಲ್ಲಿ ಮುಸುಕಿದ ಆಣವಮಲ ಮಾಯಾಮಲ ಕಾರ್ಮಿಕಮಲವೆಂಬ ಮಲತ್ರಯಂಗಳ ಕಳೆದು
ಮಾಯಾಪ್ರಕೃತಿಕಾಯದ ಪೂರ್ವಾಶ್ರಯವನು ಚಿದಗ್ನಿಯಿಂದೆ ಸುಟ್ಟು ಚಿತ್ಕಾಯವೆಂದೆನಿಸಿ
ಆ ಚಿತ್ಕಾಯಸ್ವರೂಪವಾದ ಶಿಷ್ಯನ ಮಸ್ತಕದ ಮೇಲೆ ಹಸ್ತವನಿರಿಸಿ ಮಥನವ ಮಾಡಿ
ಶಿಷ್ಯನ ಭಾವದ ಘಟ್ಟಿಯನೆ ಕರದಲ್ಲಿ ಕೊಡುವುದು. ಅದೆಂತೆಂದೊಡೆ : ``ಜ್ವಲತ್ಕಾಲಾನಲಾಭಾಸಾ ತಟಿತ್ಕೋಟಿ ಸಮಪ್ರಭಾ