ಗುರುಸ್ಥಲಭಕ್ತರ ಮೂಲ ಜ್ಞಾನಶಕ್ತಿಗಳಾರು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರುಸ್ಥಲಭಕ್ತರ ಮೂಲ ಜ್ಞಾನಶಕ್ತಿಗಳಾರು ಗುರುಸ್ವರೂಪವಾದವು. ಆ ಗುರುಸ್ವರೂಪವನುಳ್ಳ ಶಕ್ತಿಗಳಿಂದ
ಪರಮಚೈತನ್ಯವೆಂಬ ಮಂಟಪ ಉದಯಿಸಿ ಸಕಲಲೋಕಕ್ಕೆ ಆದಿಯಾಯಿತ್ತು. ಆ ಮಂಟಪದ ಮೇಲೆ ನಾನು ಕುಳಿತು ಸಂತೋಷದಿಂದ ಗುಹೇಶ್ವರಲಿಂಗವ ಕಣ್ಣು ತುಂಬಿ ನೋಡಿದ ನೋಟ ಸಕಲಭಕ್ತರಿಗೆ ಕೂಟವಾಯಿತ್ತು ಕಾಣಾ ಸಂಗನಬಸವಣ್ಣಾ.