ಗುರುಹಸ್ತದಲ್ಲಿ ಉತ್ಪತ್ಯವಾಗಿ, ಜಂಗಮಾನುಭವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರುಹಸ್ತದಲ್ಲಿ ಉತ್ಪತ್ಯವಾಗಿ
ಜಂಗಮಾನುಭವ ಶರಣರ ಸಂಗದಲ್ಲಿ ಬೆಳೆದು
ನಿಜಲಿಂಗದಲ್ಲಿ ಲೀಯವಾದ ಗುರುಚರ ಭಕ್ತರು ತಮ್ಮ ಸ್ಥೂಲಕಾಯವೆಂಬ ನರಕಂಥೆಯ ಕಳೆದರೆ
ಭಕ್ತ ಬಂಧುಗಳಾದ ಆಪ್ತ ಗಣಂಗಳು ಬಂದು ಸಮಾಧಿಯಂ ತೆಗೆದು
ಆ ಕಾಯವೆಂಬ ಕಂಥೆಯ ನಿಕ್ಷೇಪವಂ ಮಾಡುವುದೆ ಸದಾಚಾರ. ಇಂತಲ್ಲದೆ ಮೃತವಾದನೆಂದು ಗೂಟವಂ ಬಲಿದು
ಗುಂಟಿಕೆಯನಿಕ್ಕಿ
ಶೋಕಂಗೆಯ್ದು
ಪ್ರೇತಸೂತಕ ಕರ್ಮವಿಡಿದು
ತದ್ದಿನವಂ ಮಾಡುವದನಾಚಾರ
ಪಂಚಮಹಾಪಾತಕ. ಅವಂಗೆ ಗುರು ಲಿಂಗ ಜಂಗಮ ಪ್ರಸಾದವಿಲ್ಲ ಅದೆಂತೆಂದೊಡೆ: ``ಯೋ ಗುರುಂ ಮೃತಭಾವೇನ ತದ್ದಿನಂ ಯಸ್ಯ ಶೋಚ್ಯತೇ ಗುರುಲಿಂಗಪ್ರಸಾದಂ ಚ ನಾಸ್ತಿ ನಾಸ್ತಿ ವರಾನನೇ ಎಂದುದಾಗಿ
ಪ್ರೇತಸೂತಕದ ಪಾತಕರಿಗೆ ಅಘೋರನರಕ ತಪ್ಪದು. ಇಂತಪ್ಪ ಅಘೋರನರಕಿಗಳ ಮುಖವ ನೋಡಲಾಗದು ಕಾಣಾ ಕೂಡಲಚೆನ್ನಸಂಗಯ್ಯ.