ಗುರುಹಸ್ತದೊಳು ಪುನರ್ಜಾತನಾದ ಭಕ್ತನಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರುಹಸ್ತದೊಳು ಪುನರ್ಜಾತನಾದ ಭಕ್ತನಲ್ಲಿ ಆವ ಜನ್ಮಜಾತಿಯ ಬೆದಕಲಪ್ಪುದು ? ಅವೆಲ್ಲ ಪ್ರಾಕೃತರಿಗಲ್ಲದೆ ಅಪ್ರಾಕೃತರಿಗುಂಟೆ ಹೇಳಾ ? ``ಅಪ್ರಾಕೃತಸ್ಯ ಭಕ್ತಸ್ಯ ಗುರುಹಸ್ತಾಮಲಾಂಬುಜಾತ್ ಪುನರ್ಜಾತಸ್ಯಾತ್ಮಜನ್ಮ ಜಾತ್ಯಾದೀನ್ನ ಚ ಕಲ್ಪಯೇತ್ ' ಎಂಬ ಆಗಮವನರಿಯದೆ
ನಿಮ್ಮ ಶರಣರಲ್ಲಿ ಜಾತಿಯ ಹುಡುಕುವ ಕಡುಪಾತಕಿಗ? ಎನ್ನತ್ತ ತೋರದಿರಯ್ಯಾ ಕೂಡಲಚೆನ್ನಸಂಗಮದೇವಾ