ಗುರು ಗುರುವೆಂದೇನೊ, ಪರಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರು ಗುರುವೆಂದೇನೊ
ಪರಕ್ಕೆ ಹೆಸರ ಹೇಳುವನ್ನಕ್ಕವೆ ? ಲಿಂಗ ಲಿಂಗವೆಂದೇನೊ
ಅಂಗ ಬೀಳುವನ್ನಕ್ಕವೆ ? ಜಂಗಮ ಜಂಗಮವೆಂದೇನೊ
ಧನವ ಸವೆವನ್ನಕ್ಕವೆ ? ಪ್ರಸಾದ ಪ್ರಸಾದವೆಂದೇನೊ
ಉಂಡು ಕಳಚಿ ಪ್ರಳಯಕ್ಕೊಳಗಾಗುವನ್ನಕ್ಕವೆ ? ಪಾದತೀರ್ಥ ಪಾದತೀರ್ಥವೆಂದೇನೊ
ಕೊಂಡು ಕೊಂಡು ಮುಂದೆ ಜಲವ ಮಾಡುವನ್ನಕ್ಕವೆ ? ಅಲ್ಲಿ ನಿಂದಿರದಿರಾ ಮನವೆ ! ನಿಂದಡೆ ನೀನು ಕೆಡುವೆ ಬಂದಡೆ ನಾನು ಕೆಡುವೆ. ಎನ್ನ ತಂದೆ ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣಂಗೆ ಪ್ರಭುದೇವರು ತೋರಿದರೀಯನುವ !