ವಿಷಯಕ್ಕೆ ಹೋಗು

ಗುರು ಲಿಂಗ ಜಂಗಮದ

ವಿಕಿಸೋರ್ಸ್ದಿಂದ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಗುರು ಲಿಂಗ ಜಂಗಮದ ಭಕ್ತರೆಂದು ಗುಣಕಥನವ ನುಡಿದುಕೊಂಡು ಎಮಗೆ ಅನ್ಯದೈವವಿಲ್ಲವೆಂಬ ಸೋರೆಯ ಬಣ್ಣದ ಅಣ್ಣಗಳು ನೀವು ಕೇಳಿಭೋ. ನೀವರಿಯದಿದ್ದರೆ ನಾ ಹೇಳಿಹೆ ಕೇಳಿಭೋ. ಹೆಣ್ಣೊಂದು ಭೂತ; ಮಣ್ಣೊಂದು ಭೂತ; ಹೊನ್ನೊಂದು ಭೂತ. ಹೆಣ್ಣು ನಿಮ್ಮದೆಂಬಿರಿ; ಮಣ್ಣು ನಿಮ್ಮದೆಂಬಿರಿ; ಹೊನ್ನು ನಿಮ್ಮದೆಂಬಿರಿ. ಅವೇ ಪ್ರಾಣವಾಗಿ ಸಾವುತ್ತ ಹುಟ್ಟುತ್ತಿಪ್ಪಿರಿ. ಆ ಭೂತ ನಿಮ್ಮಹಿಡಿದು
ಹಿಸಿಕಿ ಕೊಂದು ಕೂಗಿ
ತಿಂದು ತೇಗಿ
ಹೀರಿ ಹಿಪ್ಪೆಯ ಮಾಡಿ ಗಾರುಮಾಡುತಿಪ್ಪವು ಕಾಣಿಭೋ. ಅ[ವ] ನೀವು ಹಿಡಿದು ಕೀರ್ತಿಸುತಿರ್ದು ಎಮಗೆ ಅನ್ಯದೈವವಿಲ್ಲೆಂಬ ಕುನ್ನಿಮನುಜರ ಮೆಚ್ಚುವನೇ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.