ಗೋವಿನ ಹೊಟ್ಟೆಯಲ್ಲಿ ಘೃತವಿದ್ದಡೇನೊ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಗೋವಿನ ಹೊಟ್ಟೆಯಲ್ಲಿ ಘೃತವಿದ್ದಡೇನೊ ಆ ಗೋವು ದಿನದಿನಕ್ಕೆ ಪುಷ್ಟವಾಗಬಲ್ಲುದೆ ? ಅದು ಕಾರಣ_ ಆ ಗೋವ ಪೋಷಿಸಿ ಕರೆದು ಕಾಸಿ
ಘೃತವ ಮಾಡಿ ಆ ಗೋವಿಂಗೆ ಕುಡಿಯಲೆರೆದಡೆ ಆ ಗೋವು ದಿನದಿನಕ್ಕೆ ಪುಷ್ಟವಹುದು. ಹಾಂಗೆ
ತನ್ನಲ್ಲಿ ವಸ್ತುವಿದ್ದಡೇನೊ ? ವಸ್ತುವ ಗುರುಮುಖದಿಂದ ಕರಸ್ಥಲಕ್ಕೆ ಪಡೆದು
ಸತ್ಕ್ರಿಯೆಯಿಂದ ಪ್ರಾಣಕ್ಕೆ ವೇಧಿಸಿದಲ್ಲದೆ ಪ್ರಾಣಲಿಂಗವಾಗದು. ಕೂಡಲಚೆನ್ನಸಂಗಯ್ಯನಲ್ಲಿ
ಇಷ್ಟಲಿಂಗವ ಸತ್ಕ್ರಿಯೆಯಿಂದ ಪ್ರಾಣಕ್ಕೆ ವೇದ್ಥಿಸಿ
ತಾನೆಂಬ ಅನಿಷ್ಟವ ತೊಲಗಿಸಿದಲ್ಲದೆ ಪ್ರಾಣಲಿಂಗಸಂಬಂಧವಾಗಬಾರದು