ಗುರುಭಕ್ತನಾದಲ್ಲಿ ಘಟಧರ್ಮವಳಿದು ಲಿಂಗಭಕ್ತನಾದಲ್ಲಿ ಸಂಚಲ ನಿಂದು ಜಂಗಮಭಕ್ತನಾದಲ್ಲಿ ತ್ರಿವಿಧಾಂಗ ಸಲೆ ಸಂದು ಇಂತೀ ತ್ರಿವಿಧಭಕ್ತಿಯಲ್ಲಿ ತ್ರಿಕರಣಶುದ್ಧನಾದ ಆತ್ಮಂಗೆ ಮತ್ರ್ಯ-ಕೈಲಾಸವೆಂಬ ಕಾಳುಮಾತಿಲ್ಲ. ಆತ ನಿತ್ಯಮುಕ್ತ ಎನ್ನಯ್ಯ ಚೆನ್ನರಾಮನಾಗಿ.