ಘನತರವಾದ ಚಿತ್ರದ ರೂಪ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಘನತರವಾದ ಚಿತ್ರದ ರೂಪ ಬರೆಯಬಹುದಲ್ಲದೆ
ಪ್ರಾಣವ ಬರೆಯಬಹುದೆ ಅಯ್ಯಾ? ದಿವ್ಯಾಗಮಂಗಳು ಹೇಳಿದ ಕ್ರೀಯಲ್ಲಿ ದೀಕ್ಷೆಯ ಮಾಡಬಹುದಲ್ಲದೆ
ಭಕ್ತಿಯ ಮಾಡಬಹುದೆ ಅಯ್ಯಾ? ಪ್ರಾಣವಹ ಭಕ್ತಿಯ ತನ್ಮಯ ನೀನು. ಈ ಗುಣವುಳ್ಳಲ್ಲಿ ನೀನಿಹೆ
ಇಲ್ಲದಲ್ಲಿ ನೀನಿಲ್ಲ ಗುಹೇಶ್ವರಾ.