ಘನಲಿಂಗದೇವರು ಹೊಟ್ಟೆಯಕಿಚ್ಚಿಗೆ ಘನಲಿಂಗದೇವರೆಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಘನಲಿಂಗದೇವರು ಘನಲಿಂಗದೇವರೆಂದು ನುಡಿದುಕೊಂಬ ಬಿನುಗು ಹೊಲೆಯರನೇನೆಂಬೆನಯ್ಯಾ ! ಹೊಟ್ಟೆಯಕಿಚ್ಚಿಗೆ ಒಟ್ಟಿದ ಬಣವೆಯ ಸುಟ್ಟಾತ ಘನಲಿಂಗದೇವರೆ ? ಕೊಟ್ಟಾತ ಒಳಗು
ಕೊಡದಾತ ಹೊರಗೆಂದು ಕಟ್ಟಿದಲಿಂಗವ ಮೆಟ್ಟಿ ಮೆಟ್ಟಿ ಹರಿವಾತ ಘನಲಿಂಗದೇವರೆ ? ಒಡೆಯನ ವೇಷವ ಧರಿಸಿ ಒಡಲ ಕಿಚ್ಚಿಗೆ ತುಡುಗನಾಯಂತೆ ಕಡಿದು ಕನ್ನವನಿಕ್ಕುವಾತ ಘನಲಿಂಗದೇವರೆ ? ಅಹುದಾದುದನಲ್ಲಮಾಡಿ ಅಲ್ಲವಾದುದ ಅಹುದುಮಾಡಿ ಅಧರ್ಮ ಅನ್ಯಾಯದಲ್ಲಿ ಹೊಡೆದಾಡಿ ಹೊಲಬುದಪ್ಪಿ ಮಡಿದುಹೋಗುವ ಬಾಯಬಡಕ ಭ್ರಷ್ಟಮಾದಿಗರ ಘನಲಿಂಗದೇವರೆಂದಡೆ ಅಘೋರನರಕ ತಪ್ಪದಯ್ಯಾ ಅಖಂಡೇಶ್ವರಾ ?