ಘನವ ನೆನೆವ ಮನದಲ್ಲಿ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಘನವ ನೆನೆವ ಮನದಲ್ಲಿ ತನುವಿನಾಸೆ ಮುನ್ನಿಲ್ಲ
ನೆನೆವ ಮನವನೊಳಕೊಂಡ ಘನವನೇನೆಂಬೆನಯ್ಯಾ ! ತನ್ನಲ್ಲಿ ತಾನೆಯಾಗಿತ್ತು ! ನೆನಹಳಿದ ನಿರಾಳವ ಕಂಡು ಬೆರಗಾದೆ ! ಅಂತು ಇಂತು ಎನಲಿಲ್ಲ. ಚಿಂತೆಯಿಲ್ಲದ ಘನಗುಹೇಶ್ವರಯ್ಯನ ಬೆರಸಲಿಲ್ಲ.