Library-logo-blue-outline.png
View-refresh.svg
Transclusion_Status_Detection_Tool

ಚಂದನವ ಕಡಿದು ಕೊರೆದು

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಚಂದನವ ಕಡಿದು ಕೊರೆದು ತೇದಡೆ ನೊಂದೆನೆಂದು ಕಂಪ ಬಿಟ್ಟಿತ್ತೆ ? ತಂದು ಸುವರ್ಣವ ಕಡಿದೊರೆದಡೆ ಬೆಂದು ಕಳಂಕ ಹಿಡಿಯಿತ್ತೆ ? ಸಂದುಸಂದು ಕಡಿದ ಕಬ್ಬನು ತಂದು ಗಾಣದಲ್ಲಿಕ್ಕಿ ಅರೆದಡೆ
ಬೆಂದು ಪಾಕಗುಡದೆ ಸಕ್ಕರೆಯಾಗಿ ನೊಂದೆನೆಂದು ಸಿಹಿಯ ಬಿಟ್ಟಿತ್ತೆ ? ನಾ ಹಿಂದೆ ಮಾಡಿದ ಹೀನಂಗಳೆಲ್ಲವ ತಂದು ಮುಂದಿಳುಹಲು ನಿಮಗೇ ಹಾನಿ.ಎನ್ನ ತಂದೆ ಚೆನ್ನಮಲ್ಲಿಕಾರ್ಜುನಯ್ಯಾ
ನೀ ಕೊಂದಡೆಯೂ ಶರಣೆಂಬುದ ಮಾಣೆ.