ಚಂದ್ರೋದಯಕ್ಕೆ ಅಂಬುದ್ಥಿ ಹೆಚ್ಚುವುದಯ್ಯಾ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಚಂದ್ರೋದಯಕ್ಕೆ ಅಂಬುದ್ಥಿ ಹೆಚ್ಚುವುದಯ್ಯಾ
ಚಂದ್ರ ಕುಂದೆ
ಕುಂದುವುದಯ್ಯಾ. ಚಂದ್ರಂಗೆ ರಾಹು ಅಡ್ಡ ಬಂದಲ್ಲಿ ಅಂಬುದ್ಥಿ ಬೊಬ್ಬಿಟ್ಟಿತ್ತೆ ಅಯ್ಯಾ ಅಂಬುದ್ಥಿಯ ಮುನಿ ಆಪೋಶನವ ಕೊಂಬಲ್ಲಿ ಚಂದ್ರಮನಡ್ಡ ಬಂದನೆ
ಅಯ್ಯಾ ? ಆರಿಗಾರೂ ಇಲ್ಲ
ಕೆಟ್ಟವಂಗೆ ಕೆಳೆಯಿಲ್ಲ
ಜಗದ ನಂಟ ನೀನೆ
ಅಯ್ಯಾ
ಕೂಡಲಸಂಗಮದೇವಯ್ಯಾ !