ಚಕೋರಂಗೆ ಚಂದ್ರಮನ ಬೆಳಗಿನ

ವಿಕಿಸೋರ್ಸ್ದಿಂದ


Pages   (key to Page Status)   

ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ
ಅಂಬುಜಕೆ ಭಾನುವಿನ ಉದಯದ ಚಿಂತೆ
ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ
ಎನಗೆ ನಮ್ಮ ಕೂಡಲಸಂಗನ ಶರಣರ ನೆನೆವುದೆ ಚಿಂತೆ.