ಚಕ್ರ ಬೆಸಗೆಯ್ವಡೆ ಅಲಗಿನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಚಕ್ರ ಬೆಸಗೆಯ್ವಡೆ ಅಲಗಿನ ಹಂಗೇಕೆ ? ಮಾಣಿಕ್ಯದ ಬೆಳಗುಳ್ಳಡೆ ದೀಪದ ಹಂಗೇಕೆ ? ಪರುಷ ಕೈಯ್ಯಲುಳ್ಳಡೆ ಸಿರಿಯ ಹಂಗೇಕೆ ? ಕಾಮಧೇನು ಕರೆವಡೆ ಕರುವಿನ ಹಂಗೇಕೆ ? ಎನ್ನದೇವ ಚೆನ್ನಮಲ್ಲಿಕಾರ್ಜುನಲಿಂಗವು ಕರಸ್ಥಳದೊಳಗುಳ್ಳಡೆ ಇನ್ನಾವ ಹಂಗೇಕೆ ?