ಚರಾಚರಾತ್ಮಕ ಪ್ರಪಂಚವೆಲ್ಲ ಶಿವನ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಚರಾಚರಾತ್ಮಕ ಪ್ರಪಂಚವೆಲ್ಲ ಶಿವನ ಚಿದ್ಗರ್ಭದಿಂದುಯಿಸಿಪ್ಪವೆಂದು
ಶಿವಾಭಿನ್ನತ್ವದಿಂ ಸಕಲಪ್ರಾಣಿಗಳಲ್ಲಿ ತನ್ನಾತ್ಮಚೇತನವ ತನ್ನಲ್ಲಿ ಸಕಲ ಪ್ರಾಣಿಗಳ ಆತ್ಮ ಚೇತನವ ಕಂಡು
ದಯಾಪರತ್ವವನುಳ್ಳ ಸರ್ವಜ್ಞತಾ ಶಕ್ತಿಯನು ಭಕ್ತಿಸ್ಥಲದಲ್ಲಿ ಪಡೆವುದು ನೋಡಾ. ತನಗೆ ಬಂದ ಅಪವಾದ ನಿಂದೆ ಎಡರಾಪತ್ತುಗಳಲ್ಲಿ ಎದೆಗುಂದದೆ ಬಪ್ಪ ಸುಖ ದುಃಖ ಖೇದ ಹರ್ಷಾದಿಗಳು ಶಿವಾಜ್ಞೆಯಹುದೆಂದು ಪರಿಣತನಪ್ಪ ತೃಪ್ತಿಯ ಶಕ್ತಿಯನು ಮಾಹೇಶ್ವರಸ್ಥಲದಲ್ಲಿ ಪಡೆವುದು ನೋಡಾ. ದೇಹಾದಿ ಆದಿ ಪ್ರಪಂಚಕ್ಕೆ ಮೂಲಿಗನಾದ ಅನಾದಿ ಪರಶಿವನು ಪ್ರಸನ್ನತ್ವವನುಂಟುಮಾಡುವ ಅನಾದಿ ಬೋಧ ಶಕ್ತಿಯನು ಪ್ರಸಾದಿಸ್ಥಲದಲ್ಲಿ ಪಡೆವುದು ನೋಡಾ. ಅಂತಪ್ಪ ದೇಹಾದಿ ಪ್ರಪಂಚದ ಚಲನವಲನವು ತನ್ನಾಶ್ರಯದಲ್ಲಿ ನಡೆದು ತಾನು ಆವುದನ್ನೂ ಆಶ್ರಯಿಸದೆ ಸರ್ವಸ್ವತಂತ್ರ ತಾನೆಂಬರಿವನುಂಟುಮಾಡುವ ಸ್ವತಂತ್ರ ಶಕ್ತಿಯನು ಪ್ರಾಣಲಿಂಗಿಸ್ಥಲದಲ್ಲಿ ಪಡೆವುದು ನೋಡಾ. ತನ್ನಾಶ್ರಯವ ಪಡೆದ ದೃಶ್ಯಮಾನ ದೇಹಾದಿ ಜಗವೆಲ್ಲ ಅನಿತ್ಯವೆಂಬ ಆ ದೃಶ್ಯಮಾನದೇಹಾದಿಗಳ ಮೂಲೋತ್ಪತ್ತಿಗಳಿಗೆ ಕಾರಣನಪ್ಪ ಪತಿಪರಶಿವಲಿಂಗವೇ ನಿತ್ಯವೆಂಬರಿವನುಂಟುಮಾಡುವ ಅಲುಪ್ತ ಶಕ್ತಿಯನು ಶರಣಸ್ಥಲದಲ್ಲಿ ಪಡೆವುದು ನೋಡಾ. ಅಂಗಲಿಂಗಗಳ ಸಂಯೋಗವ ತೋರಿ
ಅಖಂಡ ಪರಶಿಲಿಂಗೈಕ್ಯವನುಂಟುಮಾಡಿ ಕೊಡುವ ಅನಂತ ಶಕ್ತಿಯನು ಐಕ್ಯಸ್ಥಲದಲ್ಲಿ ಪಡೆವುದು ನೋಡಾ. ಇದಕ್ಕೆ ಶಿವರಹಸ್ಯೇ ; 'ಯದ್ಭಕ್ತಿಸ್ಥಲಮಿತ್ಯಾಹುಸ್ತತ್ಸರ್ವಜ್ಞತ್ವಮಿತೀರ್ಯತೇ ೀ ಯನ್ಮಾಹೇಶ್ವರಂ ನಾಮ ಸಾ ತೃಪ್ತಿರ್ಮಮ ಶಾಂಕರಿ