ಚಿತ್ತುವೆಂಬ ಬಿತ್ತು ಬಲಿದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಚಿತ್ತುವೆಂಬ ಬಿತ್ತು ಬಲಿದು ಎರಡಾದಲ್ಲಿ
ಲಿಂಗವೆಂಬ ಕಳೆ ಅಂಕುರಿಸಿ ಮೂರ್ತಿಯಾಯಿತ್ತು. ಆ ಮೂರ್ತಿಯ ಘನತೆಯ ಏನೆಂದೂ ಉಪಮಿಸಬಾರದು ! ನೋಡಿದಡೆ ಮೂರ್ತಿ ಹಿಡಿದಡೆ ಬಯಲು ! ಆ ಮೂರ್ತಿಯೊಳಗದೆ ಈರೇಳು ಲೋಕದ ಪ್ರಾಣಕಳೆ. ಆ ಕಳೆಯ ಬೆಳಗು ತಾನೆ ನಮ್ಮ ಗುಹೇಶ್ವರಲಿಂಗದಲ್ಲಿ ಲೀಲಾಮೂಲದ ಪ್ರಥಮ ಭಿತ್ತಿ.