ಚೆನ್ನಯ್ಯನ ಮನೆಯ ದಾಸನ ಮಗನು ಕಕ್ಕಯ್ಯನ ಮನೆಯ ದಾಸಿಯ ಮಗಳು ಇವರಿಬ್ಬರು ಹೊಲದಲು ಬೆರಣಿಗೆ ಹೋಗಿ ಸಂಗವ ಮಾಡಿದರು. ಇವರಿಬ್ಬರಿಗೆ ಹುಟ್ಟಿದ ಮಗ ನಾನು ಕೂಡಲಸಂಗಮದೇವ ಸಾಕ್ಷಿಯಾಗಿ. 346