Library-logo-blue-outline.png
View-refresh.svg
Transclusion_Status_Detection_Tool

ಜಂಗಮಕ್ಕೆ ! ನೀಡಿದ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಜಂಗಮಕ್ಕೆ ನೀಡಿದ ತೃಪ್ತಿ ಜಗಕೆಲ್ಲ ತೃಪ್ತಿಯಾಯಿತ್ತು ಕಾಣಿರೋ ! ಜಂಗಮಕ್ಕೆ ನೀಡಿದ ತೃಪ್ತಿ ಹರಿ ಸುರ ಬ್ರಹ್ಮಾದಿಗಳಿಗೆಲ್ಲ ತೃಪ್ತಿಯಾಯಿತ್ತು ಕಾಣಿರೋ ! ಜಂಗಮಕ್ಕೆ ನೀಡಿದ ತೃಪ್ತಿ ಸ್ವರ್ಗ ಮತ್ರ್ಯ ಪಾತಾಳ ಸಚರಾಚರಂಗಳಿಗೆಲ್ಲ ತೃಪ್ತಿಯಾಯಿತ್ತು ನೋಡಿರೋ ! ಜಂಗಮಕ್ಕೆ ನೀಡಿದ ತೃಪ್ತಿ ಸಾಕ್ಷಾತ್ಪರಬ್ರಹ್ಮ ಪರಶಿವಂಗೆ ತೃಪ್ತಿಯಾಯಿತ್ತು ನೋಡಿರೋ ! ಅದೆಂತೆಂದೊಡೆ : ``ಸುರತೃಪ್ತಂ ಬುಧಸ್ತೋಮಂ ಮಮ ತೃಪ್ತಂತು ವೈಷ್ಣವಮ್