ವಿಷಯಕ್ಕೆ ಹೋಗು

ಜಂಗಮಕ್ಕೆ ಲಕ್ಷಣವಾವುದೆಂದಡೆ :

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಜಂಗಮಕ್ಕೆ
ಲಕ್ಷಣವಾವುದೆಂದಡೆ:ಲಿಂಗರೂಪಾಗಿ ಪಾದಾರ್ಚನೆಯ ಮಾಡಿಸಿಕೊಳ್ಳಬೇಕು.
ಭಕ್ತಂಗೆ ಲಕ್ಷಣವಾವುದೆಂದಡೆ: ಭೃತ್ಯರೂಪಾಗಿ ಪಾದಾರ್ಚನೆಯ ಮಾಡಬೇಕು.
ಜಂಗಮವು ಲಿಂಗರೂಪವಹ ವಿವರವೆಂತೆಂದಡೆ:ಮಾತಿನಲ್ಲಿ ನಾನು ಲಿಂಗರೂಪೆಂದಡೆ ಹರಿಯದು
ತನು ಮನ ಧನತ್ರಯಂಗಳ ಹಿಡಿದೂ ಹಿಡಿಯದೆ ಮಾಡಿಸಿಕೊಂಬುದೀಗ ಜಂಗಮಕ್ಕೆ ಲಕ್ಷಣ.
ಆ ನಿಲವಿಂಗೆ ಭವಂನಾಸ್ತಿ.
ಭಕ್ತನು ಭೃತ್ಯರೂಪವಹ ವಿವರವೆಂತೆಂದಡೆ: ಮಾತಿನಲ್ಲಿ ನಾನು ಭ್ಯತ್ಯರೂಪೆಂದಡೆ ಹರಿಯದು.
ತನು ಮನ ಧನತ್ರಯಂಗಳ ಜೀವನ ಗುಣಕ್ಕಿಕ್ಕದೆ
ಗುರುಲಿಂಗಜಂಗಮಕ್ಕೆ ಸಂದಳಿದು ದಾಸೋಹವ ಮಾಡುವುದೀಗ ಭಕ್ತಂಗೆ ಲಕ್ಷಣ.
ಆ ನಿಲವಿಂಗೆ ಭವಂನಾಸ್ತಿ.
ಇಂತೀ ಉಭಯಕುಳಸ್ಥಳದ ಸಂದಳಿದು ಒಂದಾಗಿ ನಿಂದ ನಿಲವು ಗುಹೇಶ್ವರಲಿಂಗದಲ್ಲಿ ಐಕ್ಯವು!