ಜಂಗಮದಿಂಗಿತಾಕಾರವ ನೋಡಿ ಲಿಂಗವೆಂದರಿದ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಜಂಗಮದಿಂಗಿತಾಕಾರವ ನೋಡಿ ಲಿಂಗವೆಂದರಿದ ಭಕ್ತರು ಮನ ಮನ ಬೆರಸಿದಡೆ
ಕೂರ್ಮದ ಶಿಶುವಿನ ಸ್ನೇಹದಂತೆ ಮುನ್ನವೆ ತೆರಹಿಲ್ಲದಿರಬೇಕು ನೋಡಾ. ಬಂದ ಬರವನರಿಯದೆ ನಿಂದ ನಿಲವ ನೋಡದೆ ಕೆಮ್ಮನೆ ಅಹಂಕಾರವ ಹೊತ್ತಿಪ್ಪವರ ನಮ್ಮ ಗುಹೇಶ್ವರಲಿಂಗನು ಒಲ್ಲ ಕಾಣಾ.