ಜಂಗಮದ ಮನ-ಭಾವದಲ್ಲಿ ಭಕ್ತನೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಜಂಗಮದ ಮನ-ಭಾವದಲ್ಲಿ ಭಕ್ತನೆ ಭೃತ್ಯನೆಂದು
ಭಕ್ತನ ಮನ-ಭಾವದಲ್ಲಿ ಜಂಗಮವೆ ಕರ್ತನೆಂದು ಇದ್ದ ಬಳಿಕ
ಬಂದಿತ್ತು-ಬಾರದು
ಇದ್ದತ್ತು-ಹೋುತ್ತೆಂಬ ಸಂದೇಹವಿಲ್ಲದಿರಬೇಕು. ಹೋುತ್ತೆಂಬ ಗುಣವುಳ್ಳನ್ನಕ್ಕ ನಿಮಗೆ ದೂರ
ನಿಮ್ಮವರಿಗೆ ಮುನ್ನವೆ ದೂರ
ಶಿವಾಚಾರಕ್ಕಲ್ಲಿಂದತ್ತ ದೂರ. ಜಂಗಮದ ಹರಿದ ಹರಿವು
ಜಂಗಮದ ನಿಂದ ನಿಲವು
ಜಂಗಮದ ಗಳಗರ್ಜನೆ
ಜಂಗಮದ ಕೋಳಾಟಕ್ಕೆ ಸೈರಿಸದಿದ್ದಡೆ ನೀನಂದ ಮೂಗ ಕೊಯ್ ಕೂಡಲಸಂಗಮದೇವಾ. 429