ವಿಷಯಕ್ಕೆ ಹೋಗು

ಜಂಗಮದ ಸನ್ನಿಧಿಯಲ್ಲಿ ವಾಹನವನೇರಲಮ್ಮೆ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಜಂಗಮದ ಸನ್ನಿಧಿಯಲ್ಲಿ ವಾಹನವನೇರಲಮ್ಮೆ : ಏರಿದರೆ ಭವ ಹಿಂಗದು. ಏನು ಕಾರಣ ಮುಂದೆ ಸೂಲವನೇರುವ ಪ್ರಾಪ್ತಿಯುಂಟಾದ ಕಾರಣ
ಜಂಗಮ ಬರಲಾಸನದಲ್ಲಿ ಇರಲಮ್ಮೆ : ಇದ್ದರೆ ಭವ ಹಿಂಗದು. ಏನು ಕಾರಣ ಮುಂದೆ ಕಾಯ್ದ ಇಟ್ಟಿಗೆಯ ಮೇಲೆ ಕುಳ್ಳಿರುವ ಪ್ರಾಪ್ತಿಯುಂಟಾದ ಕಾರಣ. ಜಂಗಮದ ಮುಂದೆ ದಿಟ್ಟತನದಲ್ಲಿ ಬೆರೆತು ನಿಂದಿರಲಮ್ಮೆನು ನಿಂದಡೆ ಭವ ಹಿಂಗದಾಗಿ. ಏನು ಕಾರಣ:ಮುಂದೆ ಹೆಡಗುಡಿಯ ಕಟ್ಟಿ ಕುಳ್ಳಿರಿಸುವ ಪ್ರಾಪ್ತಿಯುಂಟಾದ ಕಾರಣ. ಇಂತೀ ಬಾಧೆ ಭವಂಗಳಿಗಂಜುವೆನಯ್ಯಾ. ನಿಮ್ಮವರ ಸುಳುಹು ನೀವೆಂದೇ ಭಾವಿಸಿ
ತೊತ್ತು-ಭೃತ್ಯನಾಗಿಪ್ಪೆನಯ್ಯಾ
ಕೂಡಲಸಂಗಮದೇವಾ. 397