ಜಂಗಮಪಾದವು ಪರಮಪವಿತ್ರವಾಗಿರ್ಪುದಯ್ಯಾ, ಜಂಗಮಪಾದವು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಂಗಮಪಾದವು ಪರಮಪವಿತ್ರವಾಗಿರ್ಪುದಯ್ಯಾ
ಜಂಗಮಪಾದವು ಜಗದ್ಭರಿತವಾಗಿರ್ಪುದಯ್ಯಾ
ಜಂಗಮಪಾದವು ಆದಿಯಿಂದತ್ತತ್ತಲಾಗಿರ್ಪುದಯ್ಯಾ
`ಚರಣಂ ಪವಿತ್ರಂ ವಿತತಂ ಪುರಾಣಂ್ಡ ಎಂದುದಾಗಿ
ಜಂಗಮದ ಶ್ರೀಪಾದವ ಭಕ್ತಿಯಿಂದ ಪಿಡಿದ ಸದ್ಭಕ್ತನು ದುರಿತಾಂಬುಧಿಯಿಂದ ದೂರವಾಗಿರ್ಪನಯ್ಯಾ ಕೂಡಲಚೆನ್ನಸಂಗಮದೇವಾ