ಜಂಗಮಪ್ರಸಾದವ ಲಿಂಗಕ್ಕೆ ಸಲಿಸಬಾರದೆಂಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಂಗಮಪ್ರಸಾದವ ಲಿಂಗಕ್ಕೆ ಸಲಿಸಬಾರದೆಂಬ ಮಾತ ಕೇ?ಲಾಗದು. ಪ್ರಸಾದವೆ ಲಿಂಗ
ಆ ಲಿಂಗವೆ ಅಂಗ; ಆ ಜಂಗಮವೆ ಚೈತನ್ಯ
ಆ ಚೈತನ್ಯವೆ ಪ್ರಸಾದ. ಇಂತೀ ಉಭಯದ ಬೇಧವನರಿಯರು ನೋಡಾ ! ಜಿಹ್ವೆಯಲ್ಲಿ ಉಂಡ ರಸ ಸರ್ವೇಂದ್ರಿಯಕ್ಕೆ ಬೇರೆಯಾಗಬಲ್ಲುದೆ ? ಪ್ರಾಣಲಿಂಗದಲ್ಲಿ ಸವಿದು ಭಾವಲಿಂಗದಲ್ಲಿ ತೃಪ್ತಿಯಾದ ಬಳಿಕ ಇಷ್ಟಲಿಂಗಕ್ಕೆ ಭಿನ್ನವುಂಟೆ ? ಇದನರಿದು ಅರ್ಪಿಸಿ ಸುಖಿಸಲೊಲ್ಲರು. ದೇಹಭಾವದಲ್ಲಿ ಕೊಂಬುದು ಅನರ್ಪಿತವೆಂದರಿಯರು. ಲಿಂಗಕ್ಕೂ ಭಕ್ತಂಗೂ ಭೇದವಿಲ್ಲೆಂಬುದನರಿಯಲರಿಯರು. ಜಂಗಮಮುಖದಿಂದೊಗೆದುದು ಪ್ರಸನ್ನಪ್ರಸಾದವೆಂದರಿಯರು. ಸರ್ವೇಂದ್ರಿಯಮುಖದ್ವಾರೇ ಸದಾ ಸನ್ನಿಹಿತಃ ಶಿವಃ ಪ್ರಾಣೇ ಲಿಂಗಸ್ಥಿತಿಂ ಮತ್ವಾ ಯೋ ಭುಂಕ್ತೇ ಲಿಂಗವರ್ಜಿತಃ ಸಃ ಸ್ವಮಾಂಸಂ ಸ್ವರುಧಿರಂ ಸ್ವಮಲಂ ಭಕ್ಷಯತ್ಯಹೋ ತಸ್ಮಾಲ್ಲಿಂಗಪ್ರಸಾದಂ ಚ ನಿರ್ಮಾಲ್ಯಂ ತಜ್ಜಲಂ ತಥಾ ನೈವೇದ್ಯಂ ಚರಲಿಂಗಸ್ಯ ಶೃಣು ಷಣ್ಮುಖ ಸರ್ವದಾ ಇದು ಕಾರಣ
ಪ್ರಸಾದವೆ ಇಷ್ಟ ಪ್ರಾಣ ಭಾವವಾಗಿ ನಿಂದುದನರಿಯರು. ಇಂತೀ ಮರ್ಮವ ನಮ್ಮ ಬಸವಣ್ಣ ಬಲ್ಲ. ಇದನೆಲ್ಲರಿಗೆ ತೋರಿ
ಲಕ್ಷದ ಮೇಲೆ ತೊಂಬತ್ತುಸಾವಿರ ಜಂಗಮದ ಒಕ್ಕುದನೆತ್ತಿಕೊಂಬ; ಅಚ್ಚಪ್ರಸಾದವ ಲಿಂಗಕ್ಕಿತ್ತುಕೊಂಬ. ಪ್ರಸಾದಿಗಳು ಮೂವತ್ತಿರ್ಛಾಸಿರದೊಳಗೆ ತಾನೊಬ್ಬನಾಗಿ ಸುಖಿಸುವುದ ನಾನು ಬಲ್ಲೆನಾಗಿ
ಸಂದೇಹವಳಿದು ಬದುಕಿದೆನಯ್ಯಾ ಕೂಡಲಚೆನ್ನಸಂಗಮದೇವಾ.