ಜಂಗಮವೆ ಲಿಂಗವೆಂದು ನಂಬಿದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಂಗಮವೆ ಲಿಂಗವೆಂದು ನಂಬಿದ ಬಳಿಕ ಸಂದೇಹವಿಲ್ಲದೆ ಇರಬೇಕು ನೋಡಾ. ಸಂದುಸಂಶಯವಳಿದು ಸಯವಾದ ಭಕ್ತಿ
ಹಿಮ್ಮೆಟ್ಟಿದಡೆ ಹೋಯಿತ್ತಲ್ಲಾ. ಒಪ್ಪಚ್ಚಿ ಬಳಿಕ ಕಿಂಕಿಲನಾಗಿ
ಮತ್ತೊಪ್ಪಚ್ಚಿ ಬಳಿಕ ಅಹಂಕಾರಿಯಾದಡೆ ಹೋಗ ನೂಕುವ ಕಾಣಾ ನಮ್ಮ ಗುಹೇಶ್ವರಲಿಂಗವು.