ಜಂಗಮವೆ ಲಿಂಗವೆಂಬ ಭಾವ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಜಂಗಮವೆ ಲಿಂಗವೆಂಬ ಭಾವ ಫಲಿಸಿದಡೆ ಇಂದಿನ ಪುಣ್ಯಕ್ಕೆ ಸರಿಯುಂಟೆ ಲಿಂಗದ ಒಡಲ ಮನೆಮಾಡಿಪ್ಪ ಜಂಗಮವೆನ್ನ ಕಣ್ಣಮುಂದೆ ಸುಳಿದಡೆ ಇಂದೆನ್ನ ಭಾಗ್ಯಕ್ಕೆ ಕಡೆಯಿಲ್ಲ. ಆ ಜಂಗಮವೆ ದಿಟಕ್ಕೆನ್ನ ಮನೆಗೆ ಬಂದಡೆ ಸಲುಗೆಯ ವರವ ಹಡೆವೆನು ಕಾಣಾ
ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣಾ
ನೀನಹುದೆನಲಿಕೆ.