ಜಂಬೂದ್ವೀಪ ನವಖಂಡ ಪೃಥ್ವಿಯೊಳಗೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಜಂಬೂದ್ವೀಪ ನವಖಂಡ ಪೃಥ್ವಿಯೊಳಗೆ ಕೇಳಿರಯ್ಯಾ ಎರಡಾಳಿನ ಭಾಷೆಯ ಕೊಲುವೆನೆಂಬ ಭಾಷೆ ದೇವನದು
ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಹಿಡಿದುಕೊಂಡು ಸದ್ಭಕ್ತರು ಗೆದ್ದರು ಕಾಣಾ
ಕೂಡಲಸಂಗಮದೇವಾ.