ವಿಷಯಕ್ಕೆ ಹೋಗು

ಜಗತ್ತಿನ ಹೊಲೆಯನೆಲ್ಲವನು ಉದಕ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಜಗತ್ತಿನ ಹೊಲೆಯನೆಲ್ಲವನು ಉದಕ ಕೊಳುವುದು
ಆ ಉದಕದ ಹೊಲೆಯ ಕಳೆದಲ್ಲದೆ ಲಿಂಗಕ್ಕೆ ಮಜ್ಜನಕ್ಕೆರೆವ ಲಿಂಗದ್ರೋಹಿಗಳ ಮಾತಕೇಳಲಾಗದು. ಮೇಘಬಿಂದುವಿನಿಂದಾದ ಉದಕ
ಸೂರ್ಯನ ಮುಖದಿಂದಾಗಿ ದ್ರವ್ಯ
ಅಗ್ನಿಯ ಮುಖದಿಂದಾದ ಪಾಕ_ಇಂತಿವರ ಪೂರ್ವಾಶ್ರಯವ ಕಳೆದಲ್ಲದೆ ಭಕ್ತ ಮಾಹೇಶ್ವರರೂ ಶೀಲಪರರೂ ಮೊದಲಾದ ನಾನಾ ವ್ರತಿಗಳು ಲಿಂಗಕ್ಕೆ ಮಜ್ಜನವ ಮಾಡಲಾಗದು
ಅರ್ಪಿಸಲಾಗದು
ಅದೆಂತೆಂದಡೆ: ಉದಕದ ಪೂರ್ವಾಶ್ರಯವನು
ದ್ರವ್ಯದ ಪೂರ್ವಾಶ್ರಯವನು
ಕಳೆದಲ್ಲದೆ ಲಿಂಗಕ್ಕೆ ಅರ್ಪಿಸಬಾರದು. ಇಂತೀ ತ್ರಿವಿಧದ ಪೂರ್ವಾಶ್ರಯವ ಕಳೆವ ಪರಿಯೆಂತೆಂದಡೆ: ಉದಕದ ಪೂರ್ವಾಶ್ರಯವ ಮಂತ್ರಯುಕ್ತವಾಗಿ ಜಂಗಮದ ಪಾದೋದಕದಿಂದ ಕಳೆದು ಪಾಕಪ್ರಯತ್ನವ ಮಾಡುವುದು. ದ್ರವ್ಯದ ಪೂರ್ವಾಶ್ರಯ ಜಂಗಮದ ಹಸ್ತ ಪರುಷದಿಂದ ಹೋದುದಾಗಿ ಅಗ್ನಿಯಲಾದ ಪಾಕದ ಪೂರ್ವಾಶ್ರಯವು ಜಂಗಮದ ಪ್ರಸಾದದಿಂದ ಹೋಯಿತ್ತು. ಈ ಶಿವನ ವಾಕ್ಯಗಳನರಿದು
ಮತ್ತೆ ಜಂಗಮದ ಪಾದೋದಕದಿಂದ ಪಾಕಪ್ರಯತ್ನವ ಮಾಡಲಾಗದು
ಲಿಂಗಕ್ಕೆ ಮಜ್ಜನಕ್ಕೆರೆಯಲಾಗದೆಂಬ ಶೈವ ಬೌದ್ಧ ಚಾರ್ವಾಕ ಚಾಂಡಾಲ ಶಿವದ್ರೋಹಿಯ ಮಾತಕೇಳಿ
ಬಿಟ್ಟನಾದರೆ
_ಅವ ವ್ರತಭ್ರಷ್ಟ ಅವನ ಮುಖವ ನೋಡಲಾಗದು. ಸಾಕ್ಷಿ:``ಸರ್ವಾಚಾರಪರಿಭ್ರಷ್ಟಃ ಶಿವಾಚಾರೇನ ಶುಧ್ಯತಿ ಶಿವಾಚಾರ ಪರಿಭ್ರಷ್ಟಃ ರೌರವಂ ನರಕಂ ವ್ರಜೇತ್_ ಇಂತೆಂದುದಾಗಿ
ಸಮಸ್ತವಾದ ವ್ರತಂಗಳಲ್ಲಿ ಭ್ರಷ್ಟರಾದವರ ಶಿವಾಚಾರದಲ್ಲಿ ಶುದ್ಧನ ಮಾಡಬಹುದು
ಶಿವಾಚಾರದಲ್ಲಿ ಭ್ರಷ್ಟರಾದವರಿಗೆ ರೌರವ ನರಕ ತಪ್ಪದು. ಅವಗೆ ಪ್ರಾಯಶ್ಚಿತ್ತವಿಲ್ಲಾಗಿ ಅವನ ಮುಖವ ನೋಡಲಾಗದು
ಮತ್ತಂ ``ವ್ರತಭ್ರಷ್ಟಮುಖಂ ದೃಷ್ಟ್ವಾಶ್ವಾನಸೂಕರವಾಯಸಂ ಅಶುದ್ಧಸ್ಯ ತಥಾದೃಷ್ಟಂ ದೂರತಃ ಪರಿವರ್ಜಯೇತ್
_ಇಂತೆಂದುದಾಗಿ
ವ್ರತಶೀಲಗಳಲ್ಲಿ ನಿರುತನಾದ ಶಿವಶರಣನು ಪಥದಲ್ಲಿ ಆಚಾರಭ್ರಷ್ಟನ ಕಂಡಡೆ ಮುಖವ ನೋಡಿದಡೆ ನಾಯ ಕಂಡಂತೆ ಸೂತಕನ ಕಂಡಂತೆ ಕಾಗೆಯ ಕಂಡಂತೆ ಹೇಸಿಗೆಯ ಕಂಡಂತೆ ತೊಲಗುವುದು. ಆ ವ್ರತವ ಬಿಡಿಸಿದವನು
ಅವನ ಮಾತ ಕೇಳಿ ಬಿಟ್ಟವನು ಇಬ್ಬರಿಗೂ ಗುರುಲಿಂಗಜಂಗಮ ಪಾದೋದಕ ಪ್ರಸಾದಕ್ಕೆ ಹೊರಗಾಗಿ ಅನಂತಕಾಲ ನರಕವನೈದುವರು. ಆ ಪಾಪಿಗಳ ಮುಖವ ನೋಡಲಾಗದು
ನುಡಿಸಲಾಗದು ವ್ರತನಿಷ್ಠೆಯುಳ್ಳವರು ಕಾಣಾ ಗುಹೇಶ್ವರಾ.