ಜಗದಗಲದಲ್ಲಿ ಹಬ್ಬಿದ ಬಲೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಗದಗಲದಲ್ಲಿ ಹಬ್ಬಿದ ಬಲೆ
ಯುಗಜುಗಕ್ಕೆ ತೆಗೆಯದು ನೋಡಾ ! [ಅದು] ಬಗೆಯಲ್ಲಿ ಭ್ರಮೆಗೊಳ್ಳದು;_ತನ್ನ ಇರವಿನ ಪರಿ ಇಂತುಟಾಗಿ ! ಜಗದ ಪ್ರಾಣಿಗಳುಲಿದುಲಿದು ಮರಳಿ ಮತ್ತಲ್ಲಿಯೆ ಬೀಳಲು; ಬಲೆಯ ನೇಣು ಬಗ್ಗುರಿಯ ಕೈಯಲಿರಲು
_ ಬಲೆಯ ನೇಣ ಕಣ್ಣಿ ಕಳಚಿ
ಲಿಂಗಕ್ಕೆ ಪ್ರಾಣ ಶರಣೆನ್ನುತ್ತವೆ ನಿಂದು
ಒಡಲುಪಾಧಿಯನರಿಯದೆ ಬೆಳಗಿನಲ್ಲಿ ನಿಂದು
ಬೇಡಿದವರಿಗೆ ಅಣಿಮಾದಿ ಗುಣಂಗಳನಿತ್ತು
ಮನೋಮಧ್ಯದಲ್ಲಿ ನಿಲಿಸಿ ನೆನೆವುತ್ತಿರ್ದು ಸುಖಿಯಾದ; ಪ್ರಾಣನಾಥನ ಕಾಯ ಶೂನ್ಯಲಿಂಗಕ್ಕೆ
ಪ್ರಾಣಶೂನ್ಯಶರಣ. ಗುಹೇಶ್ವರಲಿಂಗವ ಬೆರಸಿ ಬೇರಿಲ್ಲ.