ಜಗದ್ವಂದ್ಯರೆಂದು ನುಡಿದು ನಡೆವರು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಗದ್ವಂದ್ಯರೆಂದು ನುಡಿದು ನಡೆವರು ನೋಡಾ. ಭವಬಂಧನದ ಕುಣಿಕೆಯ ಕಳೆಯಲರಿಯರು ನೋಡಾ. ಭವ ತಮ್ಮ ತುಳಿ ತುಳಿದು ಕೊಂದಿತ್ತು ನೋಡಾ ! ಶಬ್ದವೇದಿಗಳೆಂದು ನುಡಿದು ನಡೆವರು ನೋಡಾ
ನಿಃಶಬ್ದ ವೇದಿಸದಿರ್ದಡೆ
ಗುಹೇಶ್ವರ ನೋಡಿ ನಗುತ್ತಿಪ್ಪನೋಡಾ !