ಜಗದ ಜನವ ಹಿಡಿದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಗದ ಜನವ ಹಿಡಿದು ಉಪದೇಶವ ಮಾಡಿದ ಗುರುವಿಂಗೆ
ಆ ಉಪದೇಶ ಕೊಟ್ಟುಕೊಂಡ ಮಾರಿಗೆ ಹೋಹುದಲ್ಲದೆ ಅಲ್ಲಿ ನಿಜವಳವಡುವುದೆ ? ತೆರನನರಿಯದ ಸಂಸಾರ ಜೀವಿಗಳು ಮಾಡಿದ ದೋಷ ತಮ್ಮನುಂಗಿ
ಆ ಗುರುವಿಂಗೆ ಉಪಹತಿಯ ಮಾಡುವುದು ನೋಡಾ. ಗುಹೇಶ್ವರಾ_ತಾನಿಟ್ಟ ಬೇತಾಳ ತನ್ನನೆ ತಿಂದಡೆ ಬೇಕು ಬೇಡ ಎನಲುಂಟೆ ?