ಜಗದ ಸ್ವರೂಪನೆ ಮಧ್ಯದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಗದ ಮಧ್ಯದಲ್ಲಿ ಶರಣ ಜನಿಸಿದಡೇನು ಆ ಜಗದ ಸ್ವರೂಪನೆ ? ಅಲ್ಲಲ್ಲ. ಅದೇನು ಕಾರಣವೆಂದೊಡೆ : ಕೋಗಿಲೆಯ ತತ್ತಿಯನೊಡೆದು ಕಾಗೆ ಮರಿಯಮಾಡಿ ಸಲಹಿದಡೇನು ಅದು ತನ್ನ ಕೋಗಿಲೆಯ ಹಿಂಡ ಕೂಡುವುದಲ್ಲದೆ ಮರಳಿ ಕಾಗೆಯ ಹಿಂಡ ಬೆರೆವುದೆ ಹೇಳಾ ? ಲೋಕದ ಮಧ್ಯದಲ್ಲಿ ಅನಾದಿಶರಣನು ಲೋಕೋಪಕಾರಕ್ಕಾಗಿ ಜನಿಸಿದಡೇನು ತನ್ನ ಮುನ್ನಿನ ಶಿವತತ್ವವನೆ ಬೆರೆವನಲ್ಲದೆ ಮರಳಿ ಲೋಕವ ಬೆರೆಯನು ನೋಡಾ
ನಿಮ್ಮನರಿದ ಶಿವಜ್ಞಾನಿಶರಣನು ಅಖಂಡೇಶ್ವರಾ.