ಜಗವನೊಳಕೊಂಡ ಕಂಡು ಲಿಂಗವು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಗವನೊಳಕೊಂಡ ಲಿಂಗವು ಸೊಗಸಿಂದೆ ಎನ್ನ ಕರಸ್ಥಲಕ್ಕೆ ಬಂದಿರಲು
ಕಂಡು ಹಗರಣವಾಯಿತ್ತೆನಗೆ. ಗುರುಲಿಂಗಜಂಗಮಸ್ವರೂಪವಾಗಿ ಮೂರ್ತಿಗೊಂಡಿತ್ತು ನೋಡಾ. ಆಹಾ ಎನ್ನ ಪುಣ್ಯವೇ ! ಆಹಾ ಎನ್ನ ಭಾಗ್ಯವೇ ! ಆಹಾ ಅಖಂಡೇಶ್ವರಾ
ನಿಮ್ಮ ಘನವ ಕಂಡು ಎನ್ನ ಮನಕ್ಕೆ ಮಂಗಳವಾಯಿತ್ತು ನೋಡಾ.