ವಿಷಯಕ್ಕೆ ಹೋಗು

ಜಗವ ಸುತ್ತಿಪ್ಪುದು ನಿನ್ನ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಜಗವ ಸುತ್ತಿಪ್ಪುದು ನಿನ್ನ ಮಾಯೆಯಯ್ಯಾ
ನಿನ್ನ ಸುತ್ತಿಪ್ಪುದು ಎನ್ನ ಮನ ನೋಡಯ್ಯಾ. ನೀನು ಜಗಕ್ಕೆ ಬಲ್ಲಿದನು
ಆನು ನಿನಗೆ ಬಲ್ಲಿದನು
ಕಂಡಯ್ಯಾ. ಕರಿಯು ಕನ್ನಡಿಯೊಳಗಡಗಿದಂತಯ್ಯಾ
ಎನ್ನೊಳಗೆ ನೀನಡಗಿದೆ ಕೂಡಲಸಂಗಮದೇವಾ.